Home Latest ಕಟಪಾಡಿ ಓವರ್ ಪಾಸ್ ಕಾಮಗಾರಿ : ಶಾಸಕರು ಸಂಸದರಿಂದ ಪರಿಶೀಲನೆ

ಕಟಪಾಡಿ ಓವರ್ ಪಾಸ್ ಕಾಮಗಾರಿ : ಶಾಸಕರು ಸಂಸದರಿಂದ ಪರಿಶೀಲನೆ

ಉಡುಪಿ : ಕಟಪಾಡಿ ಜಂಕ್ಷನ್ ಬಳಿ ಈಗಾಗಲೇ ಓವರ್ ಪಾಸ್ ಕಾಮಗಾರಿ ಆರಂಭವಾಗಿ ಕಾಮಗಾರಿ ಭರದಿಂದ ಸಾಗುತ್ತಿದ್ದು ಸ್ಥಳಕ್ಕೆ ಇಂದು ರಂದು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

 

ಮಾರ್ಚ್ ತಿಂಗಳ ಅಂತ್ಯದೊಳಗೆ ಒಂದು ಭಾಗದ ಓವರ್ ಪಾಸ್ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಕಟಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀನಿವಾಸ್ ಕಿಣಿ, ಸುಭಾಸ್ ಬಲ್ಲಾಳ್, ಪವಿತ್ರ ಶೆಟ್ಟಿ, ಕೋಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಹರ್ಷಿತ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಮೂಡಬೆಟ್ಟು ಮಹಾಶಕ್ತಿ ಕೇಂದ್ರದ ನಿತಿನ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.