ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರೊಂದು ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಗುರುವಾರ ನೆಲ್ಯಾಡಿ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ನೆಲ್ಯಾಡಿಯಲ್ಲಿ ‘ಪ್ಲವರ್ಸ್ ಹೋಟೆಲ್’ ನಡೆಸುತ್ತಿರುವ ಜೋಜೋ ಟಿ. ಜೋರ್ಜ್ ಅವರ ಪುತ್ರ ಅಶ್ವಿನ್ ಜೋಜೋ ಜೋರ್ಜ್ (16) ಎಂದು ತಿಳಿದು ಬಂದಿದೆ. ಇವರು ಪುತ್ತೂರಿನ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.
ಗುರುವಾರ ಮುಂಜಾನೆ ಕರ್ಬಸಂಕದ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಅಶ್ವಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.



