ಮಂಗಳೂರು: ನಗರ ಸಮೀಪದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ಚನಾ (35) ಎಂಬಾಕೆ ಸೆ.17ರಂದು ಕೆಲಸಕ್ಕೆಂದು ಹೋದವರು ಮನೆಗೆ ವಾಪಸ್ ಬಾರದೆ ಕಾಣೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಈಕೆ ರಾಘವೇಂದ್ರ (42) ಎಂಬಾತನ ಜೊತೆ ಹೋಗಿರುವುದಾಗಿ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
5 ಅಡಿ ಎತ್ತರದ, ದುಂಡು ಮುಖದ, ದಪ್ಪಶರೀರದ ಈಕೆ ಕಾಣೆಯಾದ ದಿನ ಬಿಳಿ ಬಣ್ಣದ ಚುಕ್ಕೆಗಳಿರುವ ಚೂಡಿದಾರ ಧರಿಸಿದ್ದರು. ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ.
ಈಕೆಯ ಬಗ್ಗೆ ಮಾಹಿತಿಯಿದ್ದರೆ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.



