Home Crime ಉಡುಪಿ : ಸಮುದ್ರಕ್ಕೆ ಬಿದ್ದು ವ್ಯಕ್ತಿ ನಾಪತ್ತೆ…!!

ಉಡುಪಿ : ಸಮುದ್ರಕ್ಕೆ ಬಿದ್ದು ವ್ಯಕ್ತಿ ನಾಪತ್ತೆ…!!

ಉಡುಪಿ : ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೋರ್ವರು ಅ.5ರಂದು ರಾಮಚರಣ ಮೀನುಗಾರಿಕಾ ಬೋಟಿನಿಂದ ಜಾರಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ.

ನಾಪತ್ತೆಯಾದವರು ಕೊಡವೂರು ಗ್ರಾಮದ ಡಾಸ್ ಶಂಕರ್ (46) ಎಂದು ತಿಳಿದು ಬಂದಿದೆ.

ಇವರು 5 ಅಡಿ 6 ಇಂಚು ಎತ್ತರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ತುಳು ಭಾಷೆ ಮಾತನಾಡುತ್ತಾರೆ ಎಂದು ತಿಳಿದು ಬಂದಿದೆ.

ಇವರ ಕುರಿತು ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447 ಹಾಗೂ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದು ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.