ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಹಾಗೂ ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಶನಿವಾರ ಸಂಜೆ ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಡಾ.ಶಿವರಾಮ ಕಾರಂತ ಜನ್ಮದಿನೋತ್ಸವ ಪ್ರಶಸ್ತಿಯನ್ನು ಹಿರಿಯ ವಿದ್ವಾಂಸ ಹಾಗೂ ಚಿಂತಕ ಪ್ರೊ.ಬರಗೂರು ರಾಮಚಂದ್ರಪ್ಪ ಅವರಿಗೆ ಪ್ರದಾನ ಮಾಡಲಾಯಿತು.ಇದೇ ವೇಳೆ ಕಾರಂತ ವಿಶೇಷ ಪುರಸ್ಕಾರವನ್ನು ಜಿಲ್ಲೆಯ ಹಲವು ಸಾಧಕರಿಗೆ ಪ್ರದಾನ ಮಾಡಲಾಯಿತು.
ಕಾರಂತ ವಿಶೇಷ ಪುರಸ್ಕಾರ:
ಖ್ಯಾತ ಮನೋವೈದರು ಮತ್ತು ಲೇಖಕರಾದ ಡಾ.ಪಿ.ವಿ ಭಂಡಾರಿ, ಸಮಾಜ ಸೇವಕ ಗಣೇಶ್ ಕೊರಗ, ನಿವೃತ್ತ ಪ್ರಾಧ್ಯಾಪಕರು ಮತ್ತು ಲೇಖಕರಾದ ಪ್ರೊ. ಯು. ಮಹೇಶ್ವರಿ ಕಾಸರಗೊಡು, ಪತ್ರಕರ್ತ ಕುಂದಾಪುರದ ಜಾನ್ ಡಿಸೋಜಾ ಹಾಗೂ ಖ್ಯಾತ ರಂಗತಜ್ಞ ಡಾ.ಶ್ರೀಪಾದ್ ಭಟ್ ಇವರಿಗೆ ಕಾರಂತ ವಿಶೇಷ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮ್ಮದ್ ,ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ,
ಕುಂದಾಪುರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಕಾರ್ಕಳದ ಕರಾವಳಿ ರಂಗಾಯಣ ನಿರ್ದೇಶಕ ಡಾ. ಬಿ.ಆರ್ ವೆಂಕಟರಮಣ ಐತಾಳ, ಟ್ರಸ್ಟ್‌ನ ಸದಸ್ಯರಾದ ಡಾ.ಎಂ. ಪ್ರಸಾದ್ ರಾವ್, ಸತೀಶ್ ಕೊಡವೂರು, ಜಿ.ಎಂ.ಶರೀಫ್ ಹೂಡೆ ಮೊದಲಾದವರು ಉಪಸ್ಥಿತರಿದ್ದರು.
ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಉಮೇಶ್ ಶೆಟ್ಟಿ ಕೊತ್ತಾಡಿ ಅಧ್ಯಕ್ಷತೆ ವಹಿಸಿದ್ದರು. ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಆಶಯ ನುಡಿಗಳನ್ನಾಡಿದರು.ಡಾ. ಶಿವರಾಮ ಕಾರಂತ ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಕಾಲೇಜಿನ ಉಪನ್ಯಾಸಕರಾದ ರಕ್ಷಿತ್ ರಾವ್ ಗುಜ್ಜಾಡಿ, ನಿರ್ಮಲಾ, ಸ್ವಾತಿ ರಾವ್, ಯೋಗೀಶ್ ಶ್ಯಾನುಭಾಗ್, ದೀಪಿಕಾ ಜಿ. ಪರಿಚಯಿಸಿದರು. ಟ್ರಸ್ಟ್ ಸದಸ್ಯರಾದ ಡಾ. ಚೇತನ್ ಶೆಟ್ಟಿ ಕೋವಾಡಿ ನಿರೂಪಿಸಿ, ಡಾ. ಭಾರತಿ ಮರವಂತೆ ವಂದಿಸಿದರು.




