Home Latest ಉಡುಪಿಯಲ್ಲಿ ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆ ಶೀಘ್ರ ಅನುಷ್ಠಾನಕ್ಕೆ ರೈಲ್ವೆ ಯಾತ್ರಿ ಸಂಘ ಆಗ್ರಹ..!!

ಉಡುಪಿಯಲ್ಲಿ ಅಮೃತ್ ಭಾರತ್ ರೈಲ್ವೆ ನಿಲ್ದಾಣ ಯೋಜನೆ ಶೀಘ್ರ ಅನುಷ್ಠಾನಕ್ಕೆ ರೈಲ್ವೆ ಯಾತ್ರಿ ಸಂಘ ಆಗ್ರಹ..!!

ಉಡುಪಿ: ಉಡುಪಿ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಕಾಮಗಾರಿಗಳನ್ನು ಶೀಘ್ರ ಆರಂಭಿಸುವಂತೆ ಒತ್ತಾಯಿಸಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಭೇಟಿಯಾಗಿ ಹೋರಾಟ ಮುಂದುವರಿಸಲು ಉಡುಪಿ ರೈಲ್ವೆ ಯಾತ್ರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.

ಉಡುಪಿಯ ಹಿಂದಿ ಪ್ರಚಾರ ಸಭಾಭವನದಲ್ಲಿ ಶನಿವಾರ ನಡೆದ ಸಂಘದ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಧೀರಜ್ ಎನ್. ಶಾಂತಿ ವಹಿಸಿದ್ದರು.

ದೇಶದಲ್ಲಿ ರೈಲು ಸಂಪರ್ಕ ಆರಂಭವಾಗಿ ಸುಮಾರು ಒಂದು ಶತಮಾನದ ಬಳಿಕ ಉಡುಪಿಗೆ ರೈಲು ಸಂಪರ್ಕ ದೊರೆತಿದೆ. ರೈಲ್ವೆ ನಿಲ್ದಾಣದ ಅಭಿವೃದ್ಧಿಯ ದೃಷ್ಟಿಯಿಂದ ದೇಶದ ಪ್ರಮುಖ ನಿಲ್ದಾಣಗಳ ಗುಣಮಟ್ಟಕ್ಕೆ ತಲುಪುವ ನಿಟ್ಟಿನಲ್ಲಿ ಹಲವು ಪ್ರಯತ್ನಗಳು ನಡೆಯುತ್ತಿರುವುದು ಸಮಾಧಾನಕರ ಸಂಗತಿ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಮೃತ್ ಭಾರತ್ ನಿಲ್ದಾಣ ಯೋಜನೆಯನ್ನು ಉಡುಪಿಯಲ್ಲಿ ಶೀಘ್ರ ಅನುಷ್ಠಾನಗೊಳಿಸಿ, ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕು. ಈ ನಿಟ್ಟಿನಲ್ಲಿ ಸಂಘದ ಪ್ರಯತ್ನಗಳನ್ನು ನಿರಂತರವಾಗಿ ಮುಂದುವರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.