Home Crime ಲಾರಿ ಹಾಗೂ ಕಾರು ನಡುವೆ ಅಪಘಾತ : ಬಾಲಕ ಸಾವು…!!

ಲಾರಿ ಹಾಗೂ ಕಾರು ನಡುವೆ ಅಪಘಾತ : ಬಾಲಕ ಸಾವು…!!

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ರಾಷ್ಟ್ರೀಯ ಹೆದ್ದಾರಿ 275ರ ಗೂನಡ್ಕದ ಶಾರದಾ ಶಾಲೆಯ ಸಮೀಪ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಾಲಕನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರಿನಲ್ಲಿದ್ದವರು ಪುಣಚ ಮೂಲದವರು ಎನ್ನಲಾಗಿದೆ.

ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಡಿಕ್ಕಿಯ ತೀವ್ರತೆಗೆ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮೃತ ಬಾಲಕನ ಹಾಗೂ ಗಾಯಗೊಂಡವರ ಗುರುತು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದೂ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.