Home Crime ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು…!!

ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು…!!

ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ರಕೆರೆ ಎಂಬಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆ ಬಂಟ್ವಾಳ ತಾಲೂಕಿನ ವಿಟ್ಲ ಕಸಬ ನೆತ್ರಕೆರೆ ನಿವಾಸಿ ಯಮುನಾ (55) ಎಂದು ತಿಳಿದು ಬಂದಿದೆ.

ಜೀವನದಲ್ಲಿ ಜಿಗುಪ್ಸೆಗೊಂಡು ಯಮುನಾರವರು ಆತ್ಮಹತ್ಯೆ ಮಾಡಿಕೊಂಡಿರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.