Home Latest ಕಾಂಗ್ರೆಸ್ ಕಾರ್ಯಕರ್ತ ಸುನಿಲ್ ಬೈಲಕೆರೆ ಗಾಜು ತಗುಲಿ ಮೃತ್ಯು…!!

ಕಾಂಗ್ರೆಸ್ ಕಾರ್ಯಕರ್ತ ಸುನಿಲ್ ಬೈಲಕೆರೆ ಗಾಜು ತಗುಲಿ ಮೃತ್ಯು…!!

ಉಡುಪಿ: ನಿಟ್ಟೂರಿನ ಶ್ರೀದೇವಿ ಗ್ಲಾಸ್ ಫ್ಯಾಕ್ಟರಿಯಲ್ಲಿ ಗಾಜಿನ ಬ್ಲಾಕ್‌ಗಳನ್ನು ಅನ್‌ಲೋಡ್ ಮಾಡುತ್ತಿದ್ದ ವೇಳೆ ಸಂಭವಿಸಿದ ಅವಘಡದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾಮಾಜಿಕ ಕಾರ್ಯಕರ್ತ, ರಿಕ್ಷಾ ಚಾಲಕ ಸುನಿಲ್ ಬೈಲಕೆರೆ (45) ಮೃತಪಟ್ಟಿದ್ದಾರೆ.

ಉಡುಪಿ ಶ್ರೀಕೃಷ್ಣ ಮಠದ ಪರಿಸರದ ನಿವಾಸಿಯಾಗಿದ್ದ ಸುನಿಲ್, ಹಿಂದಿನ ಶೀರೂರು ಶ್ರೀಗಳಾದ ದಿ. ಲಕ್ಷ್ಮೀವರ ತೀರ್ಥ ಶ್ರೀಪಾದರ ಆಪ್ತರಾಗಿದ್ದು, ಅವರ ಕಾರು ಚಾಲಕರಾಗಿಯೂ ಸೇವೆ ಸಲ್ಲಿಸಿದ್ದರು.

ಉಡುಪಿ ನಗರದಲ್ಲಿ ಯಾವುದೇ ಅನಾಹುತ ನಡೆದರೆ ಯಾವುದೇ ಫಲಾಪೇಕ್ಷೆ ಇಲ್ಲದೇ ಸಾಮಾಜಿಕ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಗಾಜಿನ ಬ್ಲಾಕ್ ತಗುಲಿ ಗಂಭೀರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.