Home Crime ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ…!!

ಆಟೋ ಚಾಲಕ ನೇಣು ಬಿಗಿದು ಆತ್ಮಹತ್ಯೆ…!!

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಸಮೀಪದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ದುರ್ಗಾ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಕೊರ್ನಾಲು ಮನೆಯ ದಿನೇಶ್ ಪೂಜಾರಿ ಎಂದು ತಿಳಿಯಲಾಗಿದೆ.

ಮೃತರು ಆಟೋ ಚಾಲಕರಾಗಿದ್ದು, ನವರಾತ್ರಿ ಸಂದರ್ಭದಲ್ಲಿ ಹುಲಿ ವೇಷ ಹಾಕುತ್ತಿದ್ದರು. ನಿನ್ನೆ ಸಂಜೆ ವೇಳೆ ತಮ್ಮ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರು ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ.