ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಇಬ್ಬರು ವ್ಯಕ್ತಿಗಳು ಪ್ರತ್ಯೇಕ ಘಟನೆಗಳಲ್ಲಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಮೀನುಗಾರಿಕೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರ ಪತ್ತೆಗಾಗಿ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ನಾಪತ್ತೆಯಾದವರನ್ನು ಕೊಡವೂರು ಗ್ರಾಮದ ಮಲ್ಪೆ ಬಂದರಿನಿಂದ ಶ್ರೀವೀರಾಂಜನೇಯ ಪರ್ಸಿಯನ್ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದ ದ್ವಾರಿಕಾ ಶಿಕಾರ್ (28) ಹಾಗೂ ಓಂ ಶ್ರೀದತ್ತ ಮೀನುಗಾರಿಕಾ ಬೋಟ್ನಲ್ಲಿ ತೆರಳಿದ್ದ ಪ್ರಮೋದ್ ಗೌಡ (53) ಎಂದು ಗುರುತಿಸಲಾಗಿದೆ.
ಇಬ್ಬರೂ ಪ್ರತ್ಯೇಕ ಸಂದರ್ಭಗಳಲ್ಲಿ ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಗಳಿಗೆ ಸಂಬಂಧಿಸಿದಂತೆ ನಾಪತ್ತೆಯಾದವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ತಕ್ಷಣ ಮಲ್ಪೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸ್ ಉಪನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ. ಮಾಹಿತಿ ನೀಡಲು ಮಲ್ಪೆ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ 0820-2537999, ಪೊಲೀಸ್ ಉಪನಿರೀಕ್ಷಕರ ಮೊಬೈಲ್ ಸಂಖ್ಯೆ 39480805447 ಅಥವಾ ಉಡುಪಿ ವೃತ್ತ ನಿರೀಕ್ಷಕರ ಮೊಬೈಲ್ ಸಂಖ್ಯೆ 9480805430 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



