Home Crime ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.?…!!

ತಂದೆಯನ್ನೇ ಕೊಲೆಗೈಯ್ಯಲು ಸುಪಾರಿ ನೀಡಿದ್ರಾ ಚೈತ್ರಾ ಕುಂದಾಪುರ.?…!!

ಚೈತ್ರಾ ಕುಂದಾಪುರ ಹಾಗೂ ಅವರ ತಂದೆ ಬಾಲಕೃಷ್ಣ ನಾಯಕ್ ನಡುವಿನ ಜಗಳ ಬೀದಿಗೆ ಬಂದಿದೆ. ತಂದೆ ಮಗಳು ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಾ ಇದ್ದಾರೆ.

ಈಗ ತಂದೆಯೇ ಮಗಳ ವಿರುದ್ಧ ಕೊಲೆ ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ. ತಂದೆಯನ್ನು ಕೊಲೆಗೈಯ್ಯಲು ಚೈತ್ರಾ ಸುಪಾರಿ ನೀಡಿದರಾ ಎನ್ನುವ ಪ್ರಶ್ನೆ ಮೂಡಿದೆ. ಸದ್ಯ ಇದು ಯಾವ ಹಂತಕ್ಕೆ ಹೋಗಿ ಮುಟ್ಟುತ್ತದೆ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

ಚೈತ್ರಾ ಕುಂದಾಪುರ ದುಡ್ಡಿನ ಭೂತ ಎಂಬರ್ಥದಲ್ಲಿ ಬಾಲಕೃಷ್ಣ ಮಾತನಾಡಿದ್ದರು. ಚೈತ್ರಾ ಮಾಡಿದ ಅಕ್ರಮ ವ್ಯವಹಾರಗಳನ್ನು ಬಿಚ್ಚಿಟ್ಟಿದ್ದರು. ಮಗಳು ಬಿಗ್ ಬಾಸ್​ಗೆ ಹೋಗುವ ವಿಚಾರ ಕೂಡ ಗೊತ್ತಿರಲಿಲ್ಲ ಎಂದು ಹೇಳಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಮಾತನಾಡಿದ್ದ ಚೈತ್ರಾ, ‘ತಂದೆ ಓರ್ವ ಕುಡುಕ. ಕಷ್ಟದ ಸಮಯದಲ್ಲಿ ಸಹಾಯ ಮಾಡಿಲ್ಲ. ನಮ್ಮನ್ನು ಬೆಳೆಸಲು ಸಹಾಯ ಮಾಡಿಲ್ಲ’ ಎಂದು ನೇರ ಆರೋಪ ಮಾಡಿದ್ದರು. ಆ ಬಳಿಕ ಇಬ್ಬರೂ ಪರಸ್ಪರ ಆರೋಪಗಳನ್ನು ಮಾಡಿಕೊಳ್ಳುತ್ತಲೇ ಬರುತ್ತಿದ್ದಾರೆ. ಈಗ ಈ ಪ್ರಕರಣ ಒಂದು ಹಂತ ಮುಂದಕ್ಕೆ ಹೋಗಿದೆ.

ಚೈತ್ರಾ ಅವರು ಗೆಳೆಯರ ಜೊತೆ ಮನೆಗೆ ಬಂದು ದೊಡ್ಡ ಮಟ್ಟದ ದುಡ್ಡಿನ ವ್ಯವಹಾರ ಮಾಡುತ್ತಿದ್ದರು. ಒಂದು ದಿನ ರಾತ್ರಿ ಕೋಟ್ಯಂತರ ರೂಪಾಯಿ ತಂದು ಎಣಿಸಿದ್ದನ್ನು ಕಂಡು ನಾನು ಭಯಗೊಡೆ. ಇದನ್ನು ಪ್ರಶ್ನಿಸಿದ್ದಕ್ಕೆ ನನಗೆ ಅವರು ದಬಾಯಿಸಿದರು. ಹೀಗಾಗಿ, ನಾನು ಮಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕೆಲಸಕ್ಕೆ ಸೇರಿದೆ. ಇದು ಗೋವಿಂದ ಪೂಜಾರಿ ಹಣ ಎಂಬ ವಿಚಾರ ನನಗೆ ಆ ಬಳಿಕ ತಿಳಿಯಿತು. ಈ ವಿಚಾರವನ್ನು ನಾನು ಎಲ್ಲಾದರೂ ಹೇಳಬಹುದು ಎಂಬ ಕಾರಣಕ್ಕೆ ನನ್ನ ಹೆಂಡತಿ ರೋಹಿಣಿ ಹಾಗೂ ನನ್ನ ಮಗಳಾದ ಚೈತ್ರ ನನಗೆ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಲು ಪ್ರಾರಂಭಿಸಿದರು ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.