ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಮನೆಯಲ್ಲಿ ಅಡುಗೆ ಮಾಡುವಾಗ ಆಕಸ್ಮಿಕವಾಗಿ ಸೀರೆಗೆ ಬೆಂಕಿ ತಗುಲಿ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿ ಗ್ರಾಮದಲ್ಲಿ ನಡೆದಿದೆ.
ಹೆಮ್ಮಾಡಿ ಗ್ರಾಮದ ನಿವಾಸಿ ಯೋಗೀಶ್ ಪೂಜಾರಿ (40) ಅವರ ತಾಯಿ ಅಕ್ಕಮ್ಮ (81) ಅ.28 ರಂದು ಸಂಜೆ 4:30ಕ್ಕೆ ಮನೆಯಲ್ಲಿ ಅಡುಗೆ ಮಾಡುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಅವರ ಸೀರೆಗೆ ಗ್ಯಾಸ್ ಸ್ಟೌವ್‌ನ ಬೆಂಕಿ ತಗುಲಿದೆ.
ತಕ್ಷಣ ಮಗ ಗೋಪಾಲ್ ಅವರು ಅವರನ್ನು ಮಣಿಪಾಲದ KMC ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 9:30ಕ್ಕೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



