ಉಡುಪಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಜ್ವಲ್ ಕೋಟ್ಯಾನ್ ಅವರು ಶೇ. 83.25 ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರು ಅಮ್ಮುಂಜೆಯ ಗುರು ವಿದ್ವಾನ್ ಕೆ. ಭವಾನಿ ಶಂಕರ್ ಅವರ ಶಿಷ್ಯರಾಗಿದ್ದು, ತಮ್ಮ ಸಾಧನೆಯ ಮೂಲಕ ಗಮನ ಸೆಳೆದಿದ್ದಾರೆ.
ಪ್ರಜ್ವಲ್ ಅವರು ಮಾಯಾಡಿ ಪ್ರದೀಪ್ ಕೋಟ್ಯಾನ್ ಹಾಗೂ ಶ್ರೀಮತಿ ಮೀನಾಕ್ಷಿ ದಂಪತಿಯ ಪುತ್ರರಾಗಿದ್ದಾರೆ.
ಇವರ ಈ ಸಾಧನೆಗೆ ಕುಟುಂಬಸ್ಥರು, ಗುರುಗಳು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.



