Home Crime ಉಡುಪಿ: ಯವಕನೋರ್ವ ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆ…!!

ಉಡುಪಿ: ಯವಕನೋರ್ವ ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆ…!!

ಉಡುಪಿ :  ಉಡುಪಿ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಹಿರಿಯಡ್ಕದ ಪಾಡಿಗಾರ ನಿವಾಸಿ ಪ್ರದೀಪ್ ಪೂಜಾರಿ ಎಂದು ತಿಳಿದು ಬಂದಿದೆ.

ಈತ ಯುವತಿಯ ಮಾನಭಂಗಕ್ಕೆ ಯತ್ನಿಸಿ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದ ಆರೋಪಿ ಎಂದು ತಿಳಿಯಲಾಗಿದೆ.

ಗಾಯಗೊಂಡಿದ್ದ ಆರೋಪಿಯನ್ನು ಪೊಲೀಸರು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಿಂದೂ ಸಂಘಟನೆಯ ಯುವಕರು ಹಾಗೂ ಬಿಲ್ಲವ ಮುಖಂಡರು ಆಸ್ಪತ್ರೆಗೆ ಆಗಮಿಸಿದ್ದಾರೆ. ಈ ಘಟನೆಯ ವಿರುದ್ಧ ಪ್ತಕರಣ ದಾಖಲಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.