Home Crime ಮೂಡುಬಿದ್ರೆ : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ: ಯುವಕ ಮೃತ್ಯು..!!

ಮೂಡುಬಿದ್ರೆ : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ: ಯುವಕ ಮೃತ್ಯು..!!

ಮೂಡುಬಿದ್ರೆ : ಬಸ್ಸೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಂಗಳೂರು-ಕಾರ್ಕಳ ರಾ. ಹೆದ್ದಾರಿ ಬಳಿಯ ತೋಡಾರಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತಪಟ್ಟವರು ತೋಡಾರು ನಿವಾಸಿ ರಿಫಾಝ್ (19) ಎಂದು ತಿಳಿದು ಬಂದಿದೆ.

ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಅಭಿಮಾನ್ ಎಂಬ ಹೆಸರಿನ ಖಾಸಗಿ ಬಸ್ ಸ್ಕೂಟಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಸರ್ವಿಸ್ ರಸ್ತೆಯ ಮೂಲಕ ಬರಬೇಕಾಗಿದ್ದ ಬಸ್ ವಿರುದ್ಧ ದಿಕ್ಕಿನಲ್ಲಿ ಅತಿಯಾದ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ‌ ಮಾಡಿಕೊಂಡು ಬಂದು ರಿಫಾಝ್ ಸಂಚರಿಸುತ್ತದ್ದ ದ್ವಿಚಕ್ರ ವಾಹನಕ್ಕೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.

ಘಟನೆಯಿಂದ ಗಂಭೀರ ಗಾಯಗೊಂಡಿದ್ದ ರಿಫಾಝ್ ಆಸ್ಪತ್ರೆಗೆ ಸಾಗಿಸುವ ದಾರಿ‌ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.