ಕಾರ್ಕಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಮನೆಯಿಂದ ನಾಪತ್ತೆಯಾಗಿರುವ ಘಟನೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಬೈಲೂರಿನಲ್ಲಿ ನಡೆದಿದೆ.
ಬೈಲೂರಿನ ಬಾಳೆಹಿತ್ಲು ಮನೆ, ದುರ್ಗ ದೀಪ ನಿವಾಸಿ ದಿನೇಶ್ ಸಾಲ್ಯಾನ್ (46) ಅವರ ಅಣ್ಣ ಗಣೇಶ್ ಪೂಜಾರಿ (54) ನಾಪತ್ತೆಯಾದವರು ಎಂದು ತಿಳಿದು ಬಂದಿದೆ.
ಗಣೇಶ್ ಪೂಜಾರಿ ಅವರಿಗೆ ಕಳೆದ ನಾಲ್ಕು ವರ್ಷಗಳಿಂದ ಮಾನಸಿಕ ಖಾಯಿಲೆ ಇದ್ದು, ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಜೊತೆಗೆ ಅನಾರೋಗ್ಯದ ಕಾರಣ ಆದರ್ಶ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆದು ಮನೆಯಲ್ಲಿಯೇ ಇದ್ದರು. ಕಳೆದ 4 ದಿನಗಳಿಂದ ಮೌನವಾಗಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಅ.30 ರಂದು ರಾತ್ರಿ ಊಟ ಮಾಡಿ ಮಲಗಿದ್ದ ಗಣೇಶ್, ಅ.31 ರಂದು ಬೆಳಿಗ್ಗೆ 4:30ಕ್ಕೆ ಎದ್ದು ನೋಡಿದಾಗ ಮನೆಯಲ್ಲಿ ಕಾಣಿಸಿಕೊಂಡಿಲ್ಲ. ಮನೆಯ ಸುತ್ತಮುತ್ತ ಹಾಗೂ ಸಂಬಂಧಿಕರ ಮನೆಗಳಲ್ಲಿ ವಿಚಾರಿಸಿದರೂ ಪತ್ತೆಯಾಗಿಲ್ಲ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಗಂಡಸು ಕಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪತ್ತೆ ಕಾರ್ಯ ಮುಂದುವರಿಸಿದ್ದಾರೆ.
ಗಣೇಶ್ ಪೂಜಾರಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕಾರ್ಕಳ ನಗರ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಕುಟುಂಬಸ್ಥರು ಹಾಗೂ ಪೊಲೀಸರು ಮನವಿ ಮಾಡಿದ್ದಾರೆ.



