ಶಿರ್ವ : ಉಡುಪಿ ಜಿಲ್ಲೆಯ ಶಿರ್ವ ಸಮೀಪ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ವೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಪಂಜಿಮಾರು ಪಾಲಮೆಯಲ್ಲಿ ಸಂಭವಿಸಿದೆಮ
ಪಾಲಮೆಯ ನಿವಾಸಿಯೊಬ್ಬರು ಕೇವಲ ಒಂದು ತಿಂಗಳ ಹಿಂದಷ್ಟೇ ಮಂಗಳೂರಿನಲ್ಲಿ ಹೊಸ Honda Dio ಸ್ಕೂಟರ್ ಖರೀದಿಸಿದ್ದರು. ಮಂಗಳವಾರ ಮಧ್ಯಾಹ್ನ ಸ್ಕೂಟರ್ ಅನ್ನು ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ವೇಳೆ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದೆ.ಬೆಂಕಿಯ ಜ್ವಾಲೆಗಳು ತೀವ್ರಗೊಂಡ ಪರಿಣಾಮ ಸ್ಕೂಟರ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳೀಯರು ತಕ್ಷಣವೇ ಅಗ್ನಿ ನಂದಿಸಲು ಪ್ರಯತ್ನಿಸಿದರೂ, ಆಗಾಗಲೇ ವಾಹನ ಬಹುತೇಕ ನಾಶವಾಗಿತ್ತು.
ಘಟನೆಯ ಮಾಹಿತಿ ತಿಳಿದು ಶಿರ್ವ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಕಿ ಕಾಣಿಸಿಕೊಂಡ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಾಥಮಿಕ ತನಿಖೆ ಮುಂದುವರಿದಿದೆ.




