Home Crime ಮಣಿಪಾಲ: ಟೆರೇಸ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು…!!

ಮಣಿಪಾಲ: ಟೆರೇಸ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು…!!

ಉಡುಪಿ: ಮನೆಯ ಟೆರೇಸ್‌ನಿಂದ ಕಾಲು ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಡುಪಿ ತಾಲೂಕು 80 ಬಡಗುಬೆಟ್ಟು ಗ್ರಾಮದ ಶಾಂತಿನಗರದಲ್ಲಿ ನಡೆದಿದೆ.

ಮೃತರನ್ನು ಶಾಂತಿನಗರ ನಿವಾಸಿ ಸದಾಶಿವ (59) ಎಂದು ಗುರುತಿಸಲಾಗಿದೆ.

ದಿನಾಂಕ 30.10.2026 ರಂದು ಮಧ್ಯಾಹ್ನ ಸುಮಾರು 1 ಗಂಟೆಗೆ ಸದಾಶಿವ ಅವರು ಮನೆಯ ಸಮೀಪದ ತೆಂಗಿನ ಮರದಿಂದ ದೋಟಿಯ ಸಹಾಯದಿಂದ ತೆಂಗಿನಕಾಯಿ ಕೊಯ್ಯಲು ಮನೆಯ ಟೆರೇಸ್ ಮೇಲೆ ಹತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಟೆರೇಸ್‌ನಿಂದ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯವಾಗಿತ್ತು.

ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ 02.11.2026 ರಂದು ಬೆಳಿಗ್ಗೆ 6 ಗಂಟೆಗೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಮೃತರ ಸಹೋದರ ರತ್ನಕರ (49) ಅವರು ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.