Home Crime ಮಂಗಳೂರು: ಮಾದಕ ವಸ್ತು ಸೇವಿಸಿದ್ದ ವ್ಯಕ್ತಿಯ ಬಂಧನ…!!

ಮಂಗಳೂರು: ಮಾದಕ ವಸ್ತು ಸೇವಿಸಿದ್ದ ವ್ಯಕ್ತಿಯ ಬಂಧನ…!!

ಮಂಗಳೂರು: ನಗರದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬ ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, ಮಂಗಳೂರು ಉತ್ತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ರಾತ್ರಿ ಸುಮಾರು 2 ಗಂಟೆಗೆ ಪಿಎಸ್ಐ ಶೀತಲ್ ಅಲಗೂರ್ ಅವರು ಅಜಿಜುದ್ದಿನ್ ರೋಡ್ ಬಳಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಅನುಮಾನಾಸ್ಪದವಾಗಿ ಹೋಗುತ್ತಿದ್ದ ವ್ಯಕ್ತಿಯನ್ನು ನಿಲ್ಲಿಸಿ ವಿಚಾರಿಸಿದ್ದಾರೆ. ಆತ ಸರಿಯಾಗಿ ಮಾತನಾಡದೇ ಬಾಯಿ ತೊದಲಿಸುತ್ತಿದ್ದು, ವಿಚಾರಿಸಿದಾಗ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆರೋಪಿಯನ್ನು ಮೊಹಮ್ಮದ್ ನೌಶಾದ್ (32), ತಂದೆ ಮೊಹಮ್ಮದ್ ಷರೀಫ್, ವಾಸ: ಇನ್ನೋಳಿ ಪ್ರೊಸ್ಟಾ ಹೌಸ್, ಪಾವೂರ್ ಪೋಸ್ಟ್, ಮಂಗಳೂರು ಎಂದು ಗುರುತಿಸಲಾಗಿದೆ.

ತಕ್ಷಣ ಆತನನ್ನು ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಆತ Amphetamine / MET ಎಂಬ ಮಾದಕ ವಸ್ತು ಸೇವಿಸಿರುವುದು ವೈದ್ಯರ ದೃಢಪತ್ರದಿಂದ ತಿಳಿದುಬಂದಿದೆ.

ಈ ಸಂಬಂಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.