Home Crime ಬೈಕಂಪಾಡಿ ಸಮೀಪ ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಪತ್ತೆ : 16 ಗೋವುಗಳ ರಕ್ಷಣೆ...

ಬೈಕಂಪಾಡಿ ಸಮೀಪ ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ಲಾರಿ ಪತ್ತೆ : 16 ಗೋವುಗಳ ರಕ್ಷಣೆ : ಲಾರಿ ವಶಕ್ಕೆ…!!

ಮಂಗಳೂರು: ನಗರದ ಬೈಕಂಪಾಡಿ ಸಮೀಪ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪಣಂಬೂರು ಪೊಲೀಸರು ತಡೆದು ಅದರಲ್ಲಿದ್ದ 16 ಗೋವುಗಳನ್ನು ರಕ್ಷಣೆ ಮಾಡಿದ್ದಾರೆ.

ಬುಧವಾರ ಮುಂಜಾನೆ ಬಜರಂಗಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೈಕಂಪಾಡಿ ಪರಿಸರದಲ್ಲಿ ಕೆಎ 19 ಎಬ 2715 ನೋಂದಣಿ ಸಂಖ್ಯೆಯ ಲಾರಿಯನ್ನು ತಡೆದು ತಪಾಸಣೆ ಮಾಡಿದಾಗ, ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಸಾಗಾಟ ಮಾಡುವುದು ಕಂಡು ಬಂದಿದೆ.

ತಕ್ಷಣ ಕಾರ್ಯಾಚರಣೆ ಮಾಡಿದ ಪಣಂಬೂರು ಪೊಲೀಸರು ಲಾರಿಯಲ್ಲಿದ್ದ 16 ಗೋವುಗಳನ್ನು ರಕ್ಷಣೆ ಮಾಡಿದ್ದು, ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಕುರಿತಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.