ಉಡುಪಿ: ಬೈಕ್‌ನಲ್ಲಿ ಸಂಚರಿಸುತ್ತಿದ್ದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿಯ ನಿಟ್ಟೂರು ಬಳಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಕೆಎಸ್ಸಾರ್ಟಿಸಿಯ ಓಲ್ವೋ ಬಸ್ ವಿಶು ಶೆಟ್ಟಿ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಅವರ ಕೈ ಹಾಗೂ ಕಾಲಿಗೆ ಗಾಯಗಳಾಗಿವೆ.
ವೈದ್ಯಕೀಯ ಪರೀಕ್ಷೆಯ ಬಳಿಕ ವೈದ್ಯರು ಸುಮಾರು 20 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.





