ಉಡುಪಿ: ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪನಿರೀಕ್ಷಕರಾಗಿ (ಪಿಎಸ್ಐ) ತಿಮ್ಮೇಶ್ ಅವರನ್ನು ನೇಮಕ ಮಾಡಿ ಪಶ್ಚಿಮ ವಲಯ ಐಜಿಪಿ ಆದೇಶ ಹೊರಡಿಸಿದ್ದಾರೆ.
‘ಈ ಹಿಂದೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಶ್ ಅವರನ್ನು ಹಿರಿಯಡ್ಕ ಠಾಣೆಯ ಠಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ.
ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರದೀಪ್ ಪೂಜಾರಿ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿದಂತೆ ಅಂದಿನ ಪಿಎಸ್ಐ ಪುನೀತ್ ಅವರನ್ನು ಪಶ್ಚಿಮ ವಲಯ ಡಿಐಜಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಇದರಿಂದ ತೆರವಾಗಿದ್ದ ಸ್ಥಾನಕ್ಕೆ ಇದೀಗ ತಿಮ್ಮೇಶ್ ಅವರನ್ನು ನೇಮಕ ಮಾಡಲಾಗಿದೆ.
ಮಲ್ಪೆ, ಕಾಪು, ಅಜೆಕಾರ್, ಬೈಂದೂರು ಹಾಗೂ ಮಣಿಪಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿರುವ ತಿಮ್ಮೇಶ್ ‘ಅವರು ವಿವಿಧ ಕ್ರಿಮಿನಲ್ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿದೆ ಅನುಭವ ಹೊಂದಿದ್ದಾರೆ.




