Home Crime ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಅಪ್ರಾಪ್ತ ಬಾಲಕ ಸಹಿತ ನಾಲ್ವರು ಆರೋಪಿಗಳು ಅರೆಸ್ಟ್…!!

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ : ಅಪ್ರಾಪ್ತ ಬಾಲಕ ಸಹಿತ ನಾಲ್ವರು ಆರೋಪಿಗಳು ಅರೆಸ್ಟ್…!!

ಉಡುಪಿ: ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರ ಪೊಲೀಸರು ಉತ್ತರ ಪ್ರದೇಶದ ಪವನ್ ಕುಮಾರ್ ಸೇರಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಪ್ರಕರಣದ ಆರೋಪಿಗಳ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಬ್ರಹ್ಮಾವರ ವೃತ್ತ ನಿರೀಕ್ಷಕರ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ನವೆಂಬರ್ 3ರಂದು ಮಧ್ಯಪ್ರದೇಶಕ್ಕೆ ತೆರಳಿ ಭೋಪಾಲ್ ರೈಲ್ವೆ ನಿಲ್ದಾಣದ ಬಳಿ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪತ್ರಾವನದ ಸುಖುರ, ಬಂಗಾಲಿ ಪಟ್ಟಿಯ ನಿವಾಸಿ ಪವನ್ ಕುಮಾರ್ (24) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆದಿತ್ತು.

ಪವನ್ ಕುಮಾರ್‌ನನ್ನು ನವೆಂಬರ್ 5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ಸುರಕ್ಷತೆಯ ದೃಷ್ಟಿಯಿಂದ ಪರಿವೀಕ್ಷಣಾಲಯದಲ್ಲಿ ಇರಿಸಲಾಗಿದೆ.

ಪ್ರಕರಣದ ಉಳಿದ ಆರೋಪಿಗಳಾದ ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ವರಂಗ ಗ್ರಾಮದ ಮುನಿಯಾಲು, ವೀರ ಸಾವರ್ಕರ್ ನಗರದ ಗಾಂಧಿ ಮೈದಾನದ ಬಳಿಯ ನಿವಾಸಿ ಆದರ್ಶ ಕಾಂಚನ್ ಹಾಗೂ ಕಾರ್ಕಳ ತಾಲ್ಲೂಕಿನ ವರಂಗ ಗ್ರಾಮದ ಮುನಿಯಾಲು ಅಂಚೆಯ ದಿನೇಶ್ ಶೆಟ್ಟಿ ಅವರನ್ನು ನವೆಂಬರ್ 7ರ ರಾತ್ರಿ ಕಾರ್ಕಳದಲ್ಲಿ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ವಿರುದ್ಧ ಮುಂದಿನ ಕಾನೂನು ಪ್ರಕ್ರಿಯೆ ಕೈಗೊಳ್ಳಲಾಗಿದೆ.