Home Latest ಕೃಷ್ಣಮಠದಲ್ಲಿ ಸಂಭ್ರಮದ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ….!!

ಕೃಷ್ಣಮಠದಲ್ಲಿ ಸಂಭ್ರಮದ ದೀಪಾವಳಿ ಎಣ್ಣೆ ಶಾಸ್ತ್ರ, ತೈಲಾಭ್ಯಂಜನ….!!

ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿ ಶ್ರೀಕೃಷ್ಣಮಠದಲ್ಲಿ ಸಾಂಪ್ರದಾಯಿಕವಾಗಿ ಎಣ್ಣೆ ಶಾಸ್ತ್ರ ಹಾಗೂ ತೈಲಾಭ್ಯಂಜನ ಕಾರ್ಯಕ್ರಮ ನಡೆಯಿತು.

ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥರು ತಮ್ಮ ವಿದ್ಯಾಗುರುಗಳಾದ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥರು ಹಾಗೂ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥರ ಸಮ್ಮುಖದಲ್ಲಿ ಚಂದ್ರಶಾಲೆಯಲ್ಲಿ ಎಣ್ಣೆ ಶಾಸ್ತ್ರ ನೆರವೇರಿಸಿದರು.

ಈ ಸಂದರ್ಭದಲ್ಲಿ ಯತಿಗಳು ಪರಸ್ಪರ ಎಣ್ಣೆ ಶಾಸ್ತ್ರ ನೆರವೇರಿಸಿಕೊಂಡ ಬಳಿಕ ಭಕ್ತಾದಿಗಳಿಗೂ ಎಣ್ಣೆ ಶಾಸ್ತ್ರ ಮಾಡಿದರು. ಮಠದ ಸಿಬ್ಬಂದಿಯೂ ಸಾಂಪ್ರದಾಯಿಕವಾಗಿ ಎಣ್ಣೆ ಶಾಸ್ತ್ರ ನೆರವೇರಿಸಿ ತೈಲಾಭ್ಯಂಜನ ಮಾಡಿಕೊಳ್ಳುವ ಮೂಲಕ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಂಡರು.

ಅಷ್ಟಮಠಗಳ ವಿದ್ವಾಂಸರು, ಪರ್ಯಾಯ ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ, ಪಾರುಪತ್ಯೆದಾರ ಶ್ರೀಶ ಭಟ್ ಕಡೆಕಾರು, ಭಕ್ತರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.