Home Crime ಉಡುಪಿಯಲ್ಲಿ ಮತ್ತೆ ದಾಂಧಲೆ : ಪೆಟ್ರೋಲ್ ಪಂಪ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ…!

ಉಡುಪಿಯಲ್ಲಿ ಮತ್ತೆ ದಾಂಧಲೆ : ಪೆಟ್ರೋಲ್ ಪಂಪ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ…!

ಮಲ್ಪೆ ಬೀಚ್‌ನಲ್ಲಿ ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿದ ತಂಡದಿಂದ ಮತ್ತೊಂದು ಕೃತ್ಯ…

ಉಡುಪಿ: ಜಿಲ್ಲೆಯ ಗುಂಡಿಬೈಲ್‌ನಲ್ಲಿ ಪೆಟ್ರೋಲ್ ಪಂಪ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.

ಪುನೀತ್ ಫಲಿಮಾರ್‌ ಮತ್ತು ಅವರ ಸಹಚರರು ಪೆಟ್ರೋಲ್ ಪಂಪ್‌ಗೆ ನುಗ್ಗಿ ದಾಂಧಲೆ ನಡೆಸಿ, ಪಂಪ್ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಮಲ್ಪೆ ಬೀಚ್‌ನಲ್ಲಿ ಹಿಂದೂ ಸಂಘಟನೆಯ ಮುಖಂಡನಿಗೆ ಚೂರಿ ಇರಿದ ಪ್ರಕರಣದಲ್ಲಿ ಭಾಗಿಯಾಗಿದ್ದ ತಂಡದಿಂದ ಮತ್ತೊಂದು ಕೃತ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ಉಡುಪಿಯಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ ಮತ್ತೆ ಪ್ರಶ್ನೆಗಳು ಉದ್ಭವಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.