Home Crime ಮಂಗಳೂರು: ಪಿಲಿಕುಳ ನಿಸರ್ಗಧಾಮದ ಆಡಳಿತ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ…!!

ಮಂಗಳೂರು: ಪಿಲಿಕುಳ ನಿಸರ್ಗಧಾಮದ ಆಡಳಿತ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ…!!

ಮಂಗಳೂರು: ಹೊರವಲಯದ ಪಿಲಿಕುಳ ನಿಸರ್ಗಧಾಮದ ಆಡಳಿತ ಕಚೇರಿ ಮೇಲೆ ಮಂಗಳೂರಿನ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಗಾನಾ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಪಿಲಿಕುಳ ನಿಸರ್ಗಧಾಮದ ಜೈವಿಕ ಉದ್ಯಾನವನ ಮತ್ತು ವಿಜ್ಞಾನ ಕೇಂದ್ರದ ಕಚೇರಿ ಮೇಲೆ ಈ ದಾಳಿ ನಡೆದಿದೆ.

ಹಣ ದುರುಪಯೋಗ ಆರೋಪದ ಮೇರೆಗೆ ಲೋಕಾಯುಕ್ತ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಅಧೀನದಲ್ಲಿ ನಿಸರ್ಗಧಾಮ ಇದೆ. ಪ್ರಾಧಿಕಾರದ ಅಧೀನ ವಿಜ್ಞಾನ ಕೇಂದ್ರ, ಉದ್ಯಾನವನವನ್ನು ಒಳಗೊಂಡಿದೆ.