ಬ್ರಹ್ಮಾವರ: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆ ಸಾರ್ವಜನಿಕ ಸ್ಥಳದಲ್ಲಿ ಮಾರಾಮಾರಿಗೆ ತಿರುಗಿದ ಘಟನೆ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ಪೇತ್ರಿ ನ್ಯೂ ಕುಬೇರ ಬಾರ್ ಎಂಡ್ ರೆಸ್ಟೋರೆಂಟ್ ಸಮೀಪ ನಡೆದಿದೆ.
ನವೆಂಬರ್ 9ರಂದು ರಾತ್ರಿ ಸುಮಾರು 10 ಗಂಟೆಗೆ ಸುನೀಲ್ ನಾಯ್ಕ್, ರೋಶನ್ ಡಿಸೋಜಾ ಹಾಗೂ ರೂಪೇಶ್ ಶೆಟ್ಟಿ ಎಂಬವರು ಹಣಕಾಸಿನ ವಿಚಾರವಾಗಿ ಪರಸ್ಪರ ಮಾತುಕತೆ ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಒಬ್ಬರನ್ನೊಬ್ಬರು ದೂಡಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಸಾರ್ವಜನಿಕ ಸ್ಥಳದಲ್ಲೇ ಹೊಡೆದಾಡಿಕೊಂಡು ಸಾರ್ವಜನಿಕರ ನೆಮ್ಮದಿಗೆ ಭಂಗ ಉಂಟುಮಾಡಿದ್ದಾರೆ.
ಈ ಬಗ್ಗೆ ಮಾಹಿತಿ ಪಡೆದ ಬ್ರಹ್ಮಾವರ ಪೊಲೀಸರು ರಾತ್ರಿ 10:30ರ ಸುಮಾರಿಗೆ ಸ್ಥಳಕ್ಕೆ ಧಾವಿಸಿದ್ದು, ಪೊಲೀಸರನ್ನು ಕಂಡು ಓಡಿಹೋಗಲು ಯತ್ನಿಸಿದ ಮೂವರನ್ನೂ ಸುತ್ತುವರಿದು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 209/2026ರಂತೆ ಬಿಎನ್‌ಎಸ್ ಕಲಂ 194(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.



