Home Crime ಬೆಳ್ತಂಗಡಿ : ಸರಣಿ ಅಪಘಾತ : ಇಬ್ಬರು ದ್ವಿಚಕ್ರ ಸವಾರರು ಮೃತ್ಯು…!!

ಬೆಳ್ತಂಗಡಿ : ಸರಣಿ ಅಪಘಾತ : ಇಬ್ಬರು ದ್ವಿಚಕ್ರ ಸವಾರರು ಮೃತ್ಯು…!!

ಬೆಳ್ತಂಗಡಿ : ದಕ್ಷಿಣ ಕನ್ನಡ ‌ಜಿಲ್ಲೆಯ ಬೆಳ್ತಂಗಡಿ ಸಮೀಪ ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯ ಚರ್ಚ್ ರಸ್ತೆಯಲ್ಲಿ ಸಂಭವಿಸಿದೆ ಮ

ಮೃತಪಟ್ಟವರು ಸ್ಕೂಟರ್ ಸವಾರ ನಾವೂರಿನ ಸಂತೋಷ್ (32) ಹಾಗೂ ಬೈಕ್ ಸವಾರ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್ (33) ಎಂದು ತಿಳಿದು ಬಂದಿದೆ.

ಮಂಗಳೂರಿನಿಂದ ಚಿಕ್ಕಮಗಳೂರು ಕಡೆ ಹೋಗುತ್ತಿದ್ದ ಟಾಟಾ ಗೂಡ್ಸ್ ವಾಹನ ಗುರುವಾಯನಕೆರೆ ಕಡೆ ಹೋಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಗೂಡ್ಸ್‌ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಎಂದು ಹೇಳಲಾಗಿದೆ. ಮಂಗಳೂರಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಂತೋಷ್ ಅಪಘಾತದ ಸ್ಥಳದಲ್ಲೇ ಮೃತಪಟ್ಟಿದ್ದು, ಸುವರ್ಣ ಪ್ರಿಂಟಿಂಗ್ ಪ್ರೆಸ್ ನಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಗಂಭೀರವಾಗಿ ಗಾಯಗೊಂಡಿದ್ದು ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಕಾರ್ಯ ಮುಂದುವರೆಸಿದ್ದಾರೆ.