ಬೆಂಗಳೂರು : ನಗರದಲ್ಲಿ ನಾಡ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಬಂಧಿತ ಆರೋಪಿ ರೌಡಿಶೀಟರ್ ಸಮೀರ್ ಎಂದು ಗುರುತಿಸಲಾಗಿದೆ.
ಬಂಧಿತ ಸಮೀರ್ ಕೆ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ದೆಹಲಿಯಲ್ಲಿ ಕಡಿಮೆ ಬೆಲೆಗೆ ನಾಡ ಪಿಸ್ತೂಲ್ ಖರೀದಿಸುತ್ತಿದ್ದನು.
ನಂತರ, ಬೆಂಗಳೂರಿನಲ್ಲಿ ಹೆಚ್ಚು ಹಣಕ್ಕೆ ಮಾರಾಟ ಮಾಡುತ್ತಿದ್ದನು. ಈ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಸಿಸಿಬಿ ಪೊಲೀಸರು ರೌಡಿಶೀಟರ್ ಸಮೀರ್ನನ್ನು ಬಂಧಿಸಿ, ಎರಡು ನಾಡಪಿಸ್ತೂಲ್ಗಳನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸರು ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.