ಉಡುಪಿ: ಸಾಮಾಜಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಹಾಗೂ ಉಡುಪಿ ಸಿಟಿ ಬಸ್ ಚಾಲಕರ ಮತ್ತು ನಿರ್ವಾಹಕರ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಪ್ರಶಾಂತ್ ಅವರು ಅಲ್ಪಕಾಲದ ಅಸೌಖ್ಯದಿಂದ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.
ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಸಾರಿಗೆ ಕ್ಷೇತ್ರದ ಚಾಲಕರು ಮತ್ತು ನಿರ್ವಾಹಕರ ಹಿತಾಸಕ್ತಿಗಳ ಪರವಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಸರಳ ವ್ಯಕ್ತಿತ್ವ, ಸ್ನೇಹಪರ ನಡೆ ಹಾಗೂ ಸಮಾಜಮುಖಿ ಚಿಂತನೆಗಳ ಮೂಲಕ ಅನೇಕರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದರು.
ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸಂತಾಪ ವ್ಯಕ್ತ ಪಡಿಸಿದ್ದಾರೆ.



