ಬೆಳ್ತಂಗಡಿ : ದಕ್ಷಿಣ ಕನ್ನಡ ಬೆಳ್ತಂಗಡಿ ಸಮೀಪ ಮಲವಂತಿಗೆ ಗ್ರಾಮದ ಬಾಳೆಹಿತ್ತಿಲು ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ವರದಿಯಾಗಿದೆ.
ಆತ್ಮಹತ್ಯೆಗೆ ಶರಣಾದ ಯುವಕ ಬಾಳೆಹಿತ್ತಿಲು ನಿವಾಸಿ ಪುನೀತ್ ಯಾನೆ ಪುರುಷೋತ್ತಮ್ ಗೌಡ ಎಂದು ತಿಳಿದು ಬಂದಿದೆ.
ಇವರು ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಬೆಳ್ತಂಗಡಿ ಶಾಖೆಯಲ್ಲಿ ಪಿಗ್ನಿ ಸಂಗ್ರಹಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಕೆಲಸಕ್ಕೆ ರಜೆ ಹಾಕಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತಮ್ಮ ಸಂಬಂಧಿಕರು ಮತ್ತು ಸಹೋದರರೊಂದಿಗೆ ಇದ್ದ ಪುನೀತ್, ಬುಧವಾರ ರಾತ್ರಿ ತಮ್ಮ ಮನೆಯ ಸಮೀಪದ ತೋಟದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



