ಮಂಗಳೂರು: ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಇಬ್ಬರು ಪ್ರಜೆಗಳನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಂಗ್ಲಾದೇಶದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಬಂಧಿತರು. ಖಚಿತ ಮಾಹಿತಿ ಮೇರೆಗೆ ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, ಅಲ್ಲಿ ಕೆಲಸ ಮಾಡುತ್ತಿದ್ದ ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಅಕ್ರಮ ವಾಸ್ತವ್ಯ ಪತ್ತೆಯಾಗಿದೆ.
ಸದ್ಯ ಆರೋಪಿಗಳನ್ನು ಬಂಧನ ಕೇಂದ್ರದಲ್ಲಿರಿಸಿದ್ದು, ಎಫ್ಆರ್ಆರ್ಒ (FRRO) ಮುಂದೆ ಹಾಜರುಪಡಿಸಿ ಗಡಿಪಾರು ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಇನ್ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದ ತಂಡ ಈ ಕಾರ್ಯಾಚರಣೆ ನಡೆಸಿದೆ.


