Home Crime ಗಂಗೊಳ್ಳಿ: ಸಮುದ್ರದಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

ಗಂಗೊಳ್ಳಿ: ಸಮುದ್ರದಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

ಗಂಗೊಳ್ಳಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಮುಳುಗಿ ಮೃತಪಟ್ಟ ಅಪರಿಚಿತ ವ್ಯಕ್ತಿಯ ಮೃತದೇಹ ಮೀನುಗಾರಿಕೆಯ ವೇಳೆ ಪತ್ತೆಯಾದ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯ ವಯಸ್ಸು ಸುಮಾರು 35 ರಿಂದ 40 ವರ್ಷ ಎಂದು ಅಂದಾಜಿಸಲಾಗಿದೆ.

ನ.12 ರಂದು ಸಂಜೆ 6 ಗಂಟೆಗೆ ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಹಿಂದುಗಡೆಯ ಅರಬ್ಬಿ ಸಮುದ್ರದಲ್ಲಿ ಈಜುತ್ತಿದ್ದ ಅಪರಿಚಿತ ವ್ಯಕ್ತಿ ಆಕಸ್ಮಿಕವಾಗಿ ಸಮುದ್ರದ ನೀರಿನಲ್ಲಿ ಮುಳುಗಿ ಹೋಗಿದ್ದರು.

ಮಧ್ಯಾಹ್ನ 3:15ಕ್ಕೆ ಪಿರ್ಯಾದಿದಾರರಾದ ದಿನೇಶ್ ಖಾರ್ವಿ (47), ಗಂಗೊಳ್ಳಿ ಗ್ರಾಮ, ಕುಂದಾಪುರ ಇವರು ಮಲ್ಯಾರಬೆಟ್ಟು ಬಳಿಯ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮಾಡುವಾಗ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.ಮೃತ ವ್ಯಕ್ತಿಯ ಗುರುತು ಪತ್ತೆಗೆ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.