Home Crime ಕಾಂಕ್ರೀಟ್ ಮಿಕ್ಸಿಂಗ್‌ ಯಂತ್ರದಡಿಗೆ ಬಿದ್ದು ಮಹಿಳೆ ಮೃತ್ಯು…!!

ಕಾಂಕ್ರೀಟ್ ಮಿಕ್ಸಿಂಗ್‌ ಯಂತ್ರದಡಿಗೆ ಬಿದ್ದು ಮಹಿಳೆ ಮೃತ್ಯು…!!

ಸಂಪ್ಯ: ಬಿಲ್ವಗಿರಿ ಸಮೀಪ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್‌ ಮಿಕ್ಸಿಂಗ್‌ ಯಂತ್ರದಡಿಗೆ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸಂಭವಿಸಿದೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ಮಾಳ ಗ್ರಾಮದ ಬಸವರಾಜರವರ ಪತ್ನಿ ಗೌರಮ್ಮ (28) ಮೃತ ದುರ್ದೈವಿ ಎಂದು ತಿಳಿಯಲಾಗಿದೆ.

ಬೆಟ್ಟಂಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರೆಂಜದಿಂದ ಬಿಲ್ವಗಿರಿ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಗೆ ಶಾಸಕರ ರೂ.1 ಕೋಟಿ ಅನುದಾನದಲ್ಲಿ ಕಾಂಕ್ರಿಟೀಕರಣ ಕಾಮಗಾರಿಯು ಕೆಲ ದಿನಗಳಿಂದ ನಡೆಯುತ್ತಿದ್ದು ರಾಯಚೂರು ಮೂಲದ ಒಂದೇ ಕುಟುಂಬದ ಹಲವು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಮೇ 23ರಂದು ಸಂಜೆ ಕೆಲಸ ಮಾಡುತ್ತಿರುವ ವೇಳೆ ಕಾಂಕ್ರೀಟ್‌ ಮಿಕ್ಸಿಂಗ್‌ ಮಿಲ್ಲರ್‌ವಾಹನ ಹಿಂದಕ್ಕೆ ಚಲಿಸುತ್ತಿದ್ದ ಸಂದರ್ಭದಲ್ಲಿ ಗೌರಮ್ಮ ಅವರು ಆಕಸ್ಮಿಕವಾಗಿ ವಾಹನದ ಚಕ್ರದಡಿಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸಂಪ್ಯ ಠಾಣಾ ಎಸ್‌.ಐ.ಜಂಬೂರಾಜ್‌ ಮಹಾಜನ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪತಿ ಬಸವರಾಜ ಅವರು ನೀಡಿದ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.