Home Crime ಶಂಕರನಾರಾಯಣ: ಮೊಣಕಾಲಿನ ನೋವಿನಿಂದ ಜೀವನದಲ್ಲಿ ಜಿಗುಪ್ಸೆ – ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

ಶಂಕರನಾರಾಯಣ: ಮೊಣಕಾಲಿನ ನೋವಿನಿಂದ ಜೀವನದಲ್ಲಿ ಜಿಗುಪ್ಸೆ – ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

ಶಂಕರನಾರಾಯಣ: ದೀರ್ಘಕಾಲದಿಂದ ಕಾಡುತ್ತಿದ್ದ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದ 55 ವರ್ಷದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಂಗವಳ್ಳಿ ಗ್ರಾಮದ ತೊಂಬಟ್ಟು ಎಂಬಲ್ಲಿ ನಡೆದಿದೆ.

ಮೃತರನ್ನು ಶೇಖರ ಪೂಜಾರಿ (55) ಎಂದು ಗುರುತಿಸಲಾಗಿದೆ. ಇವರು ಕೃಷಿ ಕೆಲಸ ಮಾಡಿಕೊಂಡಿದ್ದು, ಕಳೆದ ಎರಡು ವರ್ಷಗಳಿಂದ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದರು.

ಒಂದು ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರೂ, ಇನ್ನೊಂದು ಕಾಲಿಗೂ ಶಸ್ತ್ರಚಿಕಿತ್ಸೆ ಮಾಡಿಸಬೇಕಾಗಿತ್ತು. ನೋವಿನಿಂದಾಗಿ ನಡೆಯಲು ಕಷ್ಟವಾಗುತ್ತಿದ್ದ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.

ನವೆಂಬರ್ 14ರಂದು ಮಧ್ಯಾಹ್ನ ಸುಮಾರು 2 ಗಂಟೆಗೆ ತೋಟದ ಕಡೆಗೆ ಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದ ಶೇಖರ ಪೂಜಾರಿ ಸಂಜೆ 6 ಗಂಟೆಯಾದರೂ ವಾಪಸ್ಸಾಗಿರಲಿಲ್ಲ. ಮನೆಯವರು ಹುಡುಕಾಟ ನಡೆಸಿದಾಗ ಮನೆಯಿಂದ ಸುಮಾರು 100 ಮೀಟರ್ ದೂರದಲ್ಲಿದ್ದ ಗೇರು ಮರದ ಕೊಂಬೆಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕಾರ್ಯ ಮುಂದುವರೆಸಿದ್ದಾರೆ.