Home Latest ಶಂಕರ್ ಕುಂದರ್‌ಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ : ಕೋಟ ಬ್ಲಾಕ್ ಕಾಂಗ್ರೆಸ್ ಒಕ್ಕೊರಲಿನ ಆಗ್ರಹ…!!

ಶಂಕರ್ ಕುಂದರ್‌ಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಿ : ಕೋಟ ಬ್ಲಾಕ್ ಕಾಂಗ್ರೆಸ್ ಒಕ್ಕೊರಲಿನ ಆಗ್ರಹ…!!

ಕೋಟ: ಉಡುಪಿ ಜಿಲ್ಲೆಯ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ. ಕುಂದರ್ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಕೋಟ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ.

ಕಳೆದ 40 ವರ್ಷಗಳಿಂದ ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುತ್ತಿರುವ ಶಂಕರ್ ಕುಂದರ್ ಅವರಿಗೆ ಇದುವರೆಗೂ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ. ಕುಂದಾಪುರ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರಗಳಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರನ್ನು ಹೈಕಮಾಂಡ್ ಸಮಾಧಾನಪಡಿಸಿತ್ತು. ಆದರೂ ಅವರ ಸೇವೆಯನ್ನು ಪಕ್ಷ ಗುರುತಿಸಿಲ್ಲ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋಟ ಬ್ಲಾಕ್ ಕಾಂಗ್ರೆಸ್‌ಗೆ ಜಿಲ್ಲೆಯಲ್ಲೇ ಸ್ವಂತ ಕಚೇರಿ ಇರುವುದು ಶಂಕರ್ ಕುಂದರ್ ಅವರ ಪರಿಶ್ರಮದಿಂದ. ಬ್ಲಾಕ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವಲ್ಲಿ ಅವರ ಪಾತ್ರ ಅಪಾರ. ಇಂತಹ ಹಿರಿಯ, ನಿಷ್ಠಾವಂತ ಕಾರ್ಯಕರ್ತನಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಗೌರವ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ನಿಗಮ-ಮಂಡಳಿಗಳ 2ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಈ ಬಾರಿಯಾದರೂ ಶಂಕರ್ ಎ. ಕುಂದರ್ ಅವರಿಗೆ ಸ್ಥಾನ ನೀಡಬೇಕು ಎಂದು ಕೋಟ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.