Home Crime ಉಡುಪಿ: ಕೆಲಸಕ್ಕೆ ಹೋಗಿದ್ದ ಮಹಿಳೆ ನಾಪತ್ತೆ…!!

ಉಡುಪಿ: ಕೆಲಸಕ್ಕೆ ಹೋಗಿದ್ದ ಮಹಿಳೆ ನಾಪತ್ತೆ…!!

ಉಡುಪಿ: ಕೆಲಸಕ್ಕೆ ಹೋಗಿದ್ದ ಮಹಿಳೆಯೊಬ್ಬರು ಸಂಜೆಯಾದರೂ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ಮಹಿಳೆಯನ್ನು ಸುಮಿತ್ರಾ (38) ಎಂದು ಗುರುತಿಸಲಾಗಿದೆ. ಇವರು ಉಡುಪಿ ತಾಲೂಕು 76 ಬಡಗುಬೆಟ್ಟು ಗ್ರಾಮದಲ್ಲಿ ವಾಸವಾಗಿದ್ದು, ಉಡುಪಿಯ ಕಲ್ಸಂಕದ ಬಳಿಯಿರುವ ಸದಾನಂದ ಹೆಗ್ಡೆ ಎಂಬುವವರ ಮನೆಯಲ್ಲಿ ಮನೆಕೆಲಸ ಮಾಡುತ್ತಿದ್ದರು.

ದೂರುದಾರರು ರವಿ ಎಲ್ಲಪ್ಪ (45), ತಂದೆ ಎಲ್ಲಪ್ಪ ಕೋಳಿ, ಖಾಯಂ ವಾಸ ಕೇಶಾಪುರ ಅಂಚೆ ಮತ್ತು ಗ್ರಾಮ, ಮುದ್ದೇಬಿಹಾಳ.

ನ.15 ರಂದು ಬೆಳಿಗ್ಗೆ 8:30 ಗಂಟೆಗೆ ಸುಮಿತ್ರಾ ಎಂದಿನಂತೆ ಮನೆಯಿಂದ ಕೆಲಸಕ್ಕೆ ಹೋಗಿದ್ದರು. ಸಂಜೆ 6 ಗಂಟೆಯಾದರೂ ಮನೆಗೆ ಬಂದಿಲ್ಲ. ಇದರಿಂದ ಆತಂಕಗೊಂಡ ಪತಿ ರವಿ, ಸದಾನಂದ ಹೆಗ್ಡೆ ಅವರಿಗೆ ಫೋನ್ ಮಾಡಿ ವಿಚಾರಿಸಿದಾಗ, “ಸುಮಿತ್ರಾ ಬೆಳಿಗ್ಗೆ ಕೆಲಸಕ್ಕೆ ಬಂದು, ತನಗೆ ಹುಷಾರಿಲ್ಲ, ಆಸ್ಪತ್ರೆಗೆ ಹೋಗಬೇಕೆಂದು ಹೇಳಿ ಎರಡು ತಿಂಗಳ ಸಂಬಳ ತೆಗೆದುಕೊಂಡು ಹೋಗಿದ್ದಾಳೆ” ಎಂದು ತಿಳಿಸಿದ್ದಾರೆ.

ನಂತರ ಸಂಬಂಧಿಕರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಿದರೂ ಸುಮಿತ್ರಾ ಪತ್ತೆಯಾಗಿಲ್ಲ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.