Home Crime ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ…!!

ಬ್ರಹ್ಮಾವರ: ವಿದ್ಯುತ್ ತಂತಿ ಸ್ಪರ್ಶಿಸಿ ಒಣ ಹುಲ್ಲು ಸಾಗಾಟದ ಲಾರಿಗೆ ಬೆಂಕಿ…!!

ಬ್ರಹ್ಮಾವರ: ತಾಲೂಕಿನ ಕುಂಜಾಲು ಗ್ರಾಮದ ಆರೂರು ತೆಂಕುಬೆಟ್ಟುವಿನಲ್ಲಿ ಒಣ ಹುಲ್ಲು ಸಾಗಾಟ ಮಾಡುತ್ತಿದ್ದ ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.

ಒಣ ಹುಲ್ಲಿನ ಮೂಟೆಗಳನ್ನು ಲಾರಿಯಲ್ಲಿ ಸಾಗಿಸುತ್ತಿದ್ದ ವೇಳೆ ಮೇಲಿನಿಂದ ಹಾದುಹೋಗಿದ್ದ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಹುಲ್ಲಿಗೆ ಬೆಂಕಿ ಹೊತ್ತಿಕೊಂಡಿದೆ.

ತಕ್ಷಣ ಎಚ್ಚೆತ್ತ ಚಾಲಕ ಬೆಂಕಿ ಕಾಣಿಸಿಕೊಂಡ ಎರಡು ಹುಲ್ಲಿನ ಮೂಟೆಗಳನ್ನು ರಸ್ತೆಗೆ ಎಸೆದು, ಲಾರಿಯನ್ನು ಸಮೀಪದ ಕ್ರೀಡಾಂಗಣದ ಬಳಿಗೆ ಕೊಂಡೊಯ್ದು ನೀರು ಹಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ವಿಷಯ ತಿಳಿದ ಕೂಡಲೇ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಘಟನೆಯಿಂದ ಸುಮಾರು 1.5 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.