ಉಡುಪಿ: ಸಿಬಿಐ ಮತ್ತು ದೆಹಲಿ ಪೊಲೀಸ್ ಅಧಿಕಾರಿಗಳೆಂದು ನಂಬಿಸಿ, ಮನಿ ಲಾಂಡರಿಂಗ್, ಡ್ರಗ್ಸ್ ಹಾಗೂ ಮಕ್ಕಳ ಅಪಹರಣ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ವ್ಯಕ್ತಿಯೊಬ್ಬರಿಂದ ₹15,98,976.40 ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿಸಿಕೊಂಡು ವಂಚಿಸಿರುವ ಘಟನೆ ವರದಿಯಾಗಿದೆ.
ಉಡುಪಿಯ ಶೇಷಾಚಲ (51) ವಂಚನೆಗೊಳಗಾದವರು.
2026ರ ಅಕ್ಟೋಬರ್ 18ರಂದು ಶೇಷಾಚಲ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಹಿಂದಿ ಭಾಷೆಯಲ್ಲಿ ಕರೆ ಮಾಡಿ, ದೆಹಲಿಯಲ್ಲಿ ಅವರ ಹೆಸರಿನ ಐಸಿಐಸಿಐ ಬ್ಯಾಂಕ್ ಪಾಸ್‌ಬುಕ್ ಪತ್ತೆಯಾಗಿದ್ದು, ಅದು ಪಂಕಜ್ ಶರ್ಮಾ ಎಂಬಾತನ ಮನಿ ಲಾಂಡರಿಂಗ್, ಡ್ರಗ್ಸ್ ಹಾಗೂ ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ತಿಳಿಸಿದ್ದಾನೆ. ಅಲ್ಲದೆ, ದೆಹಲಿ ಸಿಬಿಐ ಪೊಲೀಸರು ನಿಮ್ಮನ್ನು ಬಂಧಿಸಲು ನ್ಯಾಯಾಲಯದಿಂದ ಆದೇಶ ಪಡೆದಿದ್ದಾರೆ. ತಕ್ಷಣ ದೆಹಲಿಗೆ ಬರಬೇಕು, ಇಲ್ಲದಿದ್ದರೆ ವಿಡಿಯೋ ಕಾಲ್ ಮೂಲಕ ತನಿಖೆಗೆ ಸಹಕರಿಸಬೇಕು ಎಂದು ಬೆದರಿಸಿದ್ದಾನೆ.
ಹಿಂದಿ ಭಾಷೆ ಅರ್ಥವಾಗದ ಕಾರಣ ಶೇಷಾಚಲ ಅವರು ತಮ್ಮ ಪತ್ನಿಯ ಮೊಬೈಲ್ ಸಂಖ್ಯೆಯನ್ನು ನೀಡಿದ್ದು, ಬಳಿಕ ಆಕೆಗೆ ವಿಡಿಯೋ ಕರೆ ಮಾಡಲಾಗಿದೆ. ಪೊಲೀಸ್ ಸಮವಸ್ತ್ರದಲ್ಲಿದ್ದ ವ್ಯಕ್ತಿಯೊಬ್ಬ ತಾನು ದೆಹಲಿ ಪೊಲೀಸ್ ಇಲಾಖೆಯ ತನಿಖಾಧಿಕಾರಿ ಎಂದು ಪರಿಚಯಿಸಿಕೊಂಡು, ಮತ್ತೊಂದು ಮೊಬೈಲ್‌ನಲ್ಲಿ ಪ್ರಕರಣದ ಸಂಖ್ಯೆಯನ್ನು ತೋರಿಸಿದ್ದಾನೆ. ಈ ವಿಚಾರವನ್ನು ಯಾರಿಗೂ ತಿಳಿಸಬಾರದು, ಪ್ರತಿ ಗಂಟೆಗೊಮ್ಮೆ ತಮ್ಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಬೆದರಿಸಿದ್ದಾನೆ.

ಬಳಿಕ ಪ್ರತಿದಿನ ವಿಡಿಯೋ ಕರೆ ಮಾಡಿ, ನ್ಯಾಯಾಧೀಶರು, ಸಿಬಿಐ ಅಧಿಕಾರಿಗಳು ಹಾಗೂ ಆರ್‌ಬಿಐ ಅಧಿಕಾರಿಗಳು ತನಿಖೆಗೆ ಬರಲಿದ್ದಾರೆ ಎಂದು ನಂಬಿಸಿ, ಶೇಷಾಚಲ ಅವರ ಬಳಿ ಇದ್ದ ಹಣ, ಚಿನ್ನಾಭರಣ ಹಾಗೂ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡಿದ್ದಾರೆ. ಆರ್‌ಬಿಐ ತನಿಖೆಯ ನೆಪದಲ್ಲಿ ತಾವು ನೀಡಿದ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಸೂಚಿಸಿದ್ದಾರೆ.
ಇದನ್ನು ನಂಬಿದ ಶೇಷಾಚಲ ಅವರು ಅಕ್ಟೋಬರ್ 31ರಂದು ತಮ್ಮ ಬ್ಯಾಂಕ್ ಖಾತೆಯಿಂದ ₹11 ಲಕ್ಷವನ್ನು ಆರ್‌ಟಿಜಿಎಸ್ ಮೂಲಕ ಆರೋಪಿತರು ನೀಡಿದ ಯೆಸ್ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದಾರೆ. ಬಳಿಕ ನವೆಂಬರ್ 5ರಂದು ಮತ್ತೊಂದು ಬ್ಯಾಂಕ್ ಆಫ್ ಇಂಡಿಯಾ ಖಾತೆಗೆ ₹4,98,976 ಹಣವನ್ನು ವರ್ಗಾಯಿಸಿದ್ದಾರೆ.
ಪೊಲೀಸ್ ಅಧಿಕಾರಿಗಳೆಂದು ನಂಬಿಸಿ, ಬಂಧನದ ಭೀತಿ ಹುಟ್ಟಿಸಿ ಒಟ್ಟು ₹15,98,976.40 ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ಶೇಷಾಚಲ ಅವರು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂಬಂಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 37/2026ರಂತೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಕಲಂ 66(D) ಹಾಗೂ ಬಿಎನ್‌ಎಸ್ ಕಲಂ 318(4), 319(2), 308(2)ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.