Home Uncategorized ವಿಟ್ಲ : ಲಾರಿ‌ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು…!!

ವಿಟ್ಲ : ಲಾರಿ‌ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು…!!

ವಿಟ್ಲ : ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಸಮೀಪದ ನೇರಳಕಟ್ಟೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲಾರಿ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ನೇರಳಕಟ್ಟೆ ನಿವಾಸಿ, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಫಾತಿಮಾ ಇಝಾ ಇಲ್ಯಾಸ್ ಎಂದು ಗುರುತಿಸಲಾಗಿದೆ.

ಈಕೆ ಶಾಲೆ ಬಿಟ್ಟು ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.