ಸುಳ್ಯ : ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ ಘಟನೆ ಬೆಳಗ್ಗಿನ ಜಾವ ಸುಳ್ಯ ಕಸಬಾ ಗ್ರಾಮದ ಸುಳ್ಯ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್.ಎ ಪ್ರಾಯ(28) ಹಾಗೂ ಸಂಶುದ್ದೀನ್.ಎಸ್.ಎಂ. ಪ್ರಾಯ(25) ಬಂಧಿತ ಆರೋಪಿಗಳು ಎಂದು ತಿಳಿಯಲಾಗಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವುದಾಗಿ ಉದಯ ರವಿ ಪೊಲೀಸ್ ಉಪ-ನಿರೀಕ್ಷಕರು (ಕಾನೂನು & ಸುವ್ಯವಸ್ಥೆ) ಅವರಿಗೆ ಮಾಹಿತಿ ದೊರೆತಿದೆ. ಮಾಹಿತಿ ಮೇರೆಗೆ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದ್ದಾರೆ.
ಈ ವೇಳೆ ಇಬ್ಬರು ವ್ಯಕ್ತಿಗಳು ಮೈದಾನದಲ್ಲಿ ಇದ್ದ ಕಂಬಕ್ಕೆ 2 ಜಾನುವಾರುಗಳನ್ನು ಹಗ್ಗದಲ್ಲಿ ಕಟ್ಟಿ ಹಾಕಿರುವುದು ಕಂಡುಬಂದಿರುತ್ತದೆ. ಬಳಿಕ ಅವರುಗಳನ್ನು ಹಿಡಿದು ವಿಚಾರಿದಾಗ ಜಾನುವಾರುಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಕಳ್ಳತನ ಮಾಡಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿರುತ್ತಾರೆ.
ಆರೋಪಿಗಳನ್ನು ವಶಕ್ಕೆ ಪಡೆದು, ಆರೋಪಿಗಳು ಬಳಸಿದ ದ್ವಿಚಕ್ರ ವಾಹನ ಹಾಗೂ 2 ಜಾನುವಾರುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿರುತ್ತಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.



