Home Crime ವಿಟ್ಲ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ದಾರುಣ ಸಾವು…!!

ವಿಟ್ಲ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ದಾರುಣ ಸಾವು…!!

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಶಾಲಾ ಸಮವಸ್ತ್ರದಲ್ಲಿ ರಸ್ತೆ ದಾಟುತ್ತಿದ್ದ ಬಾಲಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ನೆಟ್ಲ ಮೂಡೂರು ಗ್ರಾಮದ ನೇರಳೆಕಟ್ಟೆ ಬಳಿ ನಡೆದಿದೆ.

ಮೃತ ಬಾಲಕಿಯನ್ನು ಫಾತಿಮಾ ಇಝಾ ಇಲ್ಯಾಸ್ (14) ಎಂದು ತಿಳಿಯಲಾಗಿದೆ.

ಸಂಜೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಬಾಲಕಿ ದಾಟುತ್ತಿರುವಾಗ ಮಾಣಿ ಕಡೆಯಿಂದ GJ-27-TD-3022 ನೇ ನೊಂದಣಿಯ ಲಾರಿಯನ್ನು ಅದರ ಚಾಲಕ ಗುಜರಾತ್ ಅರುವಳ್ಳಿ ನಿವಾಸಿ ಕೊಕಾಡಿ ಮೊಹಮ್ಮದ್ ಜನಾಫ್ ರೆಹಮಾನ್‌ಬಾಯ್ (30) ಎಂಬಾತನು ದುಡುಕುತನದಿಂದ ಚಲಾಯಿಸಿಕೊಂಡು ಬಂದು ಬಾಲಕಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ವೈದ್ಯರು ಪರೀಕ್ಷಿಸಿ ಬಾಲಕಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.