ಕಟಪಾಡಿ: ಉಡುಪಿ ಜಿಲ್ಲೆಯ ಕೋಟೆಬೀಡು ಬಳಿಯ ನಿವಾಸಿ ಪ್ರಶಾಂತ್ ಭೋಜ ಕುಂದರ್ (39) ಶಟಲ್ ಆಟ ಆಡುತ್ತಿರುವಾಗ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದು ಸಾವಿಗೀಡಾದ ಘಟನೆ ಸಂಭವಿಸಿದೆ.
ಸಂಜೆ 5 ಗಂಟೆಯ ಸುಮಾರಿಗೆ ಶಟಲ್ ಆಡುವಾಗ ಬಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಸ್ನೇಹಿತರು ಕೂಡಲೇ ಚಿಕಿತ್ಸೆಗೆ ಉಡುಪಿಯ ಆಸ್ಪತ್ರೆಗೆ ಕರೆದೊಯ್ದಿದ್ದರು.
ಆದರೆ ಅಲ್ಲಿ ಪರೀಕ್ಷಿಸಿದ ವೈದ್ಯರು, ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.
2 ತಿಂಗಳ ಹಿಂದೆ ಕೆಲಸ ಹುಡುಕಲು ದುಬೈಗೆ ಹೋಗಿದ್ದು ಅನಂತರ 10 ದಿನಗಳ ಹಿಂದೆ ಊರಿಗೆ ಹಿಂದಿರುಗಿದ್ದರು. ಸುಮಾರು 4 ವರ್ಷಗಳಿಂದ ಸಕ್ಕರೆ ಕಾಯಿಲೆ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು.
ಈ ಕುರಿತು ಪತ್ನಿ ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



