Home Crime ಕಾಪು ಬೀಚ್‌ನಲ್ಲಿ ಆಡುತ್ತಿದ್ದ ಮೂವರು ಪ್ರವಾಸಿಗರು ಸಮುದ್ರಪಾಲು – ಓರ್ವನ ರಕ್ಷಣೆ…!!

ಕಾಪು ಬೀಚ್‌ನಲ್ಲಿ ಆಡುತ್ತಿದ್ದ ಮೂವರು ಪ್ರವಾಸಿಗರು ಸಮುದ್ರಪಾಲು – ಓರ್ವನ ರಕ್ಷಣೆ…!!

ಕಾಪು: ದಾವಣಗೆರೆಯಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದ 5 ಮಂದಿ ಸಮುದ್ರದಲ್ಲಿ ಈಜಾಡುತ್ತಿದ್ದ ವೇಳೆ ಅಲೆಯ ಸೆಳೆತಕ್ಕೆ ಸಿಲುಕಿದ ಘಟನೆ ಭಾನುವಾರ ಸಂಜೆ ಕಾಪು ಬೀಚ್‌ನಲ್ಲಿ ನಡೆದಿದೆ. ಇದರಲ್ಲಿ 3 ಮಂದಿಯನ್ನು ರಕ್ಷಿಸಲಾಗಿದ್ದು, ಇಬ್ಬರು ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ.

ದಾವಣಗೆರೆಯ ಜಿಯಾವುಲ್ಲ ಹಾಗೂ ಅವರ ಸಂಬಂಧಿಕರು ಸೇರಿದಂತೆ ಒಟ್ಟು 10-12 ಕುಟುಂಬದ ಸದಸ್ಯರು ಪ್ರವಾಸದ ನಿಮಿತ್ತ ಕಾಪು ಬೀಚಿಗೆ ಆಗಮಿಸಿದ್ದರು. ಸಂಜೆ ಸುಮಾರು 4:30 ಗಂಟೆಗೆ ಮಕ್ಕಳು ಸಮುದ್ರದ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಮೊಹಮ್ಮದ್ ಇಸಾಕ್, ಸಮೀರ್ ಭಾಷಾ (20) ಹಾಗೂ ಮಲ್ಲಿಕ್ ರಿಯಾನ್ (15) ಸಮುದ್ರದ ಸೆಳೆತಕ್ಕೆ ಸಿಲುಕಿ ಮುಳುಗಲಾರಂಭಿಸಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ಮೊಹಮ್ಮದ್ ಇಸಾಕ್‌ನನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ಸಮೀರ್ ಭಾಷಾ ಹಾಗೂ ಮಲ್ಲಿಕ್ ರಿಯಾನ್ ಸಮುದ್ರದಲ್ಲಿ ನಾಪತ್ತೆಯಾಗಿದ್ದು, ಸ್ಥಳೀಯ ಮುಳುಗು ತಜ್ಞರು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ಸಹಕಾರದೊಂದಿಗೆ ಶೋಧ ಕಾರ್ಯ ಮುಂದುವರಿದಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.