Home Crime ಕುಂದಾಪುರ: ಮನೆಯ ಬಾವಿಯಲ್ಲಿ ವೃದ್ಧನ ಮೃತದೇಹ ಪತ್ತೆ : ಆತ್ಮಹತ್ಯೆ ಶಂಕೆ…!!

ಕುಂದಾಪುರ: ಮನೆಯ ಬಾವಿಯಲ್ಲಿ ವೃದ್ಧನ ಮೃತದೇಹ ಪತ್ತೆ : ಆತ್ಮಹತ್ಯೆ ಶಂಕೆ…!!

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ವಡೇರ್ ಹೋಬಳಿ ಗ್ರಾಮದ ಹುಂಚಾರ್ ಬೆಟ್ಟುವಿನಲ್ಲಿ 76 ವರ್ಷದ ವೃದ್ಧರೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.

ಮೃತರನ್ನು ಭಾಸ್ಕರ ಶೆಟ್ಟಿ (76) ಎಂದು ತಿಳಿದು ಬಂದಿದೆ.

ನ.22ರಂದು ಮಧ್ಯಾಹ್ನ 1 ಗಂಟೆಗೆ ಮನೆಯವರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸಾದಾಗ ಭಾಸ್ಕರ ಶೆಟ್ಟಿ ಅವರು ಮನೆಯಲ್ಲಿ ಇರಲಿಲ್ಲ. ಬಳಿಕ ಕುಟುಂಬಸ್ಥರು ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ.

ನ.23ರಂದು ಬೆಳಿಗ್ಗೆ 8.15ರ ಸುಮಾರಿಗೆ ಮನೆಯ ಬಾವಿಯಲ್ಲಿ ಭಾಸ್ಕರ ಶೆಟ್ಟಿ ಅವರ ಮೃತದೇಹ ತೇಲುತ್ತಿರುವುದು ಕಂಡುಬಂದಿದೆ.
ಅವರು ಮಾನಸಿಕ ಅನಾರೋಗ್ಯ ಹಾಗೂ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸಿದ್ದಾರೆ.