ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾದ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ – 2026 ಕಾರ್ಯಕ್ರಮವು ಇಂದು ಬೆಳಿಗ್ಗೆ 9:00 ಗಂಟೆಗೆ ಉಡುಪಿಯ ಮಹಾತ್ಮ ಗಾಂಧಿ ಕ್ರೀಡಾಂಗಣ, ಅಜ್ಜರಕಾಡು ಇಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಪ್ರತೀಕ್ ಬಾಯಲ್, ಭಾ.ಆ.ಸೇ. ಅವರು ಉದ್ಘಾಟಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಹರಿರಾಮ್ ಶಂಕರ್, ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸುಧಾಕರ್ ನಾಯಕ್ ಹಾಗೂ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಪಟು ಶ್ರೀಮತಿ ಶ್ರುತಿ ಪಿ. ಶೆಟ್ಟಿ ಅವರು ಉಪಸ್ಥಿತರಿದ್ದರು.










