ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಗಾಂಜಾ ಸೇವಿಸಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಗಾಂಜಾ ಸೇವನೆ ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ ನಿರಂಜನ್ ಗೌಡ ಬಿ.ಎಸ್ ಅವರಿಗೆ ಬೆಳಿಗ್ಗೆ 11:45 ಗಂಟೆಗೆ ಕುಂದಾಪುರ ತಾಲೂಕು ಕಂದಾವರ ಗ್ರಾಮದ ಮೂಡ್ಲಕಟ್ಟೆ ಬಸ್ ನಿಲ್ದಾಣದ ಬಳಿ ಒಬ್ಬ ವ್ಯಕ್ತಿ ಅಮಲು ಪದಾರ್ಥ ಸೇವಿಸಿದಂತೆ ಕಂಡುಬಂದಿರುವುದಾಗಿ ಬಾತ್ಮೀದಾರರಿಂದ ಮಾಹಿತಿ ಬಂದಿದೆ.
ತಕ್ಷಣ ಸ್ಥಳಕ್ಕೆ ಹೋಗಿ ಆತನನ್ನು ವಿಚಾರಿಸಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ. ಆತನನ್ನು ಪರೀಕ್ಷಿಸಿದ ವೈದ್ಯರು ಗಾಂಜಾ ಸೇವಿಸಿರುವ ಬಗ್ಗೆ ದೃಢಪಡಿಸಿ ದೃಢಪತ್ರ ನೀಡಿದ್ದಾರೆ.
ಆದುದರಿಂದ ಆರೋಪಿ ಖಲೀಲ್ (20), ನೇರಳಕಟ್ಟೆ ಪೋಸ್ಟ್, ಕರ್ಕುಂಜೆ ಗ್ರಾಮ, ಕುಂದಾಪುರ ಇವರ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿದೆ.




