ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳಿಂದ ಕೃತ್ಯ…
ಬಂಟ್ವಾಳ : ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು (ಮೇ 27) ಈ ಘಟನೆ ನಡೆದಿದೆ.
ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕನ ಸಹೋದರ ರಹೀಮ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಇವರು ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ರಹೀಮ್ ಜೊತೆ ಇನ್ನೊಬ್ಬ ವ್ಯಕ್ತಿ ಕೂಡ ಇದ್ದು, ಆತನಿಗೂ ಕಡಿಯಲಾಗಿದ್ದು, ಕೈಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.