ಉಡುಪಿ: ಕೇಂದ್ರದ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿ ಆಶೀರ್ವಾದ ಪಡೆದರು.
ಈ ಸಂದರ್ಭ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪರ್ಯಾಯ ಮಠದ ಪಾರುಪತ್ಯೆದಾರರಾದ ಸುದರ್ಶನ್ ಭಟ್ ಕಲ್ಯ, ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಉಡುಪಿ ಬಿಜೆಪಿ ಮುಖಂಡ ಮಧುಕರ್ ಮುದ್ರಾಡಿ ಹಾಗೂ ಜೆಡಿಎಸ್ ಮುಖಂಡ ವಾಸುದೇವ ರಾವ್ ಉಪಸ್ಥಿತರಿದ್ದರು.



